ಪೋಸ್ಟ್‌ಗಳು

ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಕ್ರೀಡೆ ಅಗತ್ಯ: ಶಾಸಕ ಉಮೇಶ್ ಮೇಟಿ

ಇಮೇಜ್
ಬಾಗಲಕೋಟೆ: ಮಕ್ಕಳ ಸರ್ವಾಂಗೀಣ ಬೆಳವಣಿಗೆಯಲ್ಲಿ ಶಿಕ್ಷಣದ ಜೊತೆಗೆ ಕ್ರೀಡೆಗೂ ಮಹತ್ವದ ಪಾತ್ರವಿದೆ. ಕ್ರೀಡೆಯಿಂದ ಮಕ್ಕಳಲ್ಲಿ ಶಿಸ್ತು, ಆತ್ಮವಿಶ್ವಾಸ, ನಾಯಕತ್ವ ಗುಣ ಹಾಗೂ ತಂಡದ ಮನೋಭಾವ ಬೆಳೆಸಲು ಸಾಧ್ಯ ಎಂದು ಶಾಸಕ ಉಮೇಶ್ ಮೇಟಿ ಹೇಳಿದರು. ಬಾಗಲಕೋಟೆ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಪಂಚಾಯಿತಿ ಶಾಲಾ ಶಿಕ್ಷಣ ಇಲಾಖೆ, ಬಾಗಲಕೋಟೆ ಹಾಗೂ ಅರುಣೋದಯ ಪೂರ್ವ ಕನ್ನಡ ಮತ್ತು ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ, ಕದಾಂಪುರ ಆರ್‌.ಸಿ. ಇವರ ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ ಪೂರ್ವ ಪ್ರಾಥಮಿಕ ಶಾಲೆಗಳ ವಲಯ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಚಿಕ್ಕ ವಯಸ್ಸಿನಲ್ಲಿಯೇ ಮಕ್ಕಳಲ್ಲಿ ಕ್ರೀಡಾಸಕ್ತಿ ಬೆಳೆಸಬೇಕು. ಗೆಲುವು-ಸೋಲಿಗಿಂತ ಕ್ರೀಡಾ ಸ್ಫೂರ್ತಿಯಿಂದ ಭಾಗವಹಿಸುವುದು ಮುಖ್ಯ. ಕ್ರೀಡೆಯಲ್ಲಿ ಸಾಧನೆ ಮಾಡುವ ಮಕ್ಕಳಿಗೆ ಸೂಕ್ತ ಪ್ರೋತ್ಸಾಹ ಹಾಗೂ ಅವಕಾಶ ಕಲ್ಪಿಸಬೇಕು. ಕ್ರೀಡೆಯು ಮಕ್ಕಳ ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಬೆಳವಣಿಗೆಗೂ ಸಹಕಾರಿಯಾಗಿದೆ. ಶಿಕ್ಷಣದೊಂದಿಗೆ ಕ್ರೀಡೆಗೆ ಆದ್ಯತೆ ನೀಡಿದಾಗ ಮಕ್ಕಳ ಪ್ರತಿಭೆ ಮತ್ತಷ್ಟು ಬೆಳೆಯಲು ಸಾಧ್ಯ. ಇಂದು ಕ್ರೀಡಾಕೂಟದಲ್ಲಿ ಭಾಗವಹಿಸಿರುವ ಎಲ್ಲ ಪುಟಾಣಿ ಮಕ್ಕಳು ಉತ್ಸಾಹದಿಂದ ಪಾಲ್ಗೊಂಡು ಉತ್ತಮ ಸಾಧನೆ ಮಾಡಬೇಕು ಎಂದು ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿದ್ದ ವೇದಮ...

ವಿಬಿಜಿಆರ್‌ಎಎಂ ಯೋಜನೆಯ ಸದುಪಯೋಗಪಡಿಸಿಕೊಳ್ಳಿ: ಶಾಸಕ ಉಮೇಶ್ ಮೇಟಿ

ಇಮೇಜ್
ಬಾಗಲಕೋಟೆ: ವಿಬಿಜಿಆರ್‌ಎಎಂ (VBGRAMG) ಯೋಜನೆಯ ಕುರಿತು ಗ್ರಾಮೀಣ ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳ ಸಹಯೋಗದಲ್ಲಿ ಆಯೋಜಿಸಿದ್ದ ಮೋಟಾರ್ ಸೈಕಲ್ ಜಾಗೃತಿ ರ‍್ಯಾಲಿಗೆ ನಾಯನೇಗಲಿ ಗ್ರಾಮದಲ್ಲಿ ಶಾಸಕ ಉಮೇಶ್ ಮೇಟಿ ಅವರು ಚಾಲನೆ ನೀಡಿ, ರ‍್ಯಾಲಿಯಲ್ಲಿ ಭಾಗವಹಿಸಿದರು. ವಿವಿಧ ಗ್ರಾಮಗಳ ಮೂಲಕ ಸಾಗಿದ ರ‍್ಯಾಲಿಯಲ್ಲಿ ಯೋಜನೆಯ ಉದ್ದೇಶ, ಅನುಷ್ಠಾನ ವಿಧಾನ ಹಾಗೂ ಗ್ರಾಮೀಣ ಕುಟುಂಬಗಳಿಗೆ ದೊರೆಯುವ ಉದ್ಯೋಗಾವಕಾಶಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಉಮೇಶ್ ಮೇಟಿ, ಗ್ರಾಮೀಣ ಭಾಗದ ಅರ್ಹ ಕುಟುಂಬಗಳಿಗೆ ಉದ್ಯೋಗಾವಕಾಶ ಕಲ್ಪಿಸುವುದು ಹಾಗೂ ಅವರ ಆರ್ಥಿಕ ಸ್ವಾವಲಂಬನೆಗೆ ನೆರವಾಗುವುದು ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಯೋಜನೆಯ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಸ್ಥಳೀಯ ಮಟ್ಟದಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಗ್ರಾಮಸ್ಥರು ಯೋಜನೆಯ ಕುರಿತು ಸಂಪೂರ್ಣ ಮಾಹಿತಿ ಪಡೆದುಕೊಂಡು, ದೊರೆಯುವ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು. ಜಾಗೃತಿ ಕಾರ್ಯಕ್ರಮದ ಅಂಗವಾಗಿ ವಿವಿಧ ಗ್ರಾಮಗಳ ಅರ್ಹ ಫಲಾನುಭವಿಗಳಿಗೆ ಜಾಬ್ ಕಾರ್ಡ್‌ಗಳನ್ನು ವಿತರಿಸಲಾಯಿತು. ಯೋಜನೆಯಡಿ ದೊರೆಯುವ ಉದ್ಯೋಗಾವಕಾಶಗಳು ಹಾಗೂ ಸೌಲಭ್ಯಗಳ ಕುರಿತು ಫಲಾನುಭವಿಗಳಿಗೆ ಮಾಹಿತಿ ನೀಡಲಾಯಿತು. ಈ...

ನಾರಾಯಣಗುರುಗಳ ಆದರ್ಶ ಯುವಜನತೆಗೆ ದಾರಿದೀಪ: ಉಮೇಶ ಮೇಟಿ

ಇಮೇಜ್
ಬಾಗಲಕೋಟೆ, ಆ.28: ಜಾತಿ, ಧರ್ಮ ಹಾಗೂ ಸಾಮಾಜಿಕ ಭೇದಗಳನ್ನು ಮೀರಿ ಸಮಾನತೆ ಮತ್ತು ಸಹೋದರತ್ವದ ಬದುಕಿಗೆ ದಾರಿ ತೋರಿಸಿದ ಮಹಾನ್ ಸಮಾಜ ಸುಧಾರಕ ಬ್ರಹ್ಮಶ್ರೀ ನಾರಾಯಣಗುರು ಎಂದು ಶಾಸಕ ಉಮೇಶ ಮೇಟಿ ಹೇಳಿದರು. ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ನಾರಾಯಣಗುರುಗಳು ಸಮಾಜದಲ್ಲಿ ಶಿಕ್ಷಣ, ಸಮಾನತೆ ಹಾಗೂ ಸಾಮಾಜಿಕ ಜಾಗೃತಿಗೆ ಹೆಚ್ಚಿನ ಒತ್ತು ನೀಡಿದ್ದರು. ‘ಒಂದೇ ಜಾತಿ, ಒಂದೇ ಮತ, ಒಂದೇ ದೇವರು’ ಎಂಬ ಅವರ ತತ್ವವು ಇಂದಿಗೂ ಸಮಾಜಕ್ಕೆ ಪ್ರಸ್ತುತವಾಗಿದೆ. ಶಿಕ್ಷಣವೇ ಸಾಮಾಜಿಕ ಬದಲಾವಣೆಯ ಪ್ರಮುಖ ಸಾಧನವೆಂದು ಸಾರಿದ ಅವರ ಚಿಂತನೆಗಳನ್ನು ಯುವ ಪೀಳಿಗೆ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು. ಶಿಕ್ಷಣಕ್ಕೆ ಆದ್ಯತೆ ಅಗತ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ಅನೀಲಕುಮಾರ ದಡ್ಡಿ ಮಾತನಾಡಿ, ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಣದ ಪಾತ್ರ ಮಹತ್ವದ್ದಾಗಿದೆ. ವಿದ್ಯಾರ್ಥಿಗಳು ಪರಿಶ್ರಮ, ಶಿಸ್ತು ಹಾಗೂ ಉತ್ತಮ ಮೌಲ್ಯಗಳನ್ನು ಬೆಳೆಸಿಕೊಂಡು ತಮ್ಮ ಪ್ರತಿಭೆಯನ್ನು ಸಮಾಜದ ಅಭಿವೃದ್ಧಿಗೆ ಬಳಸಿಕೊಳ್ಳಬೇಕು ಎಂದರು. ವಿದ್ಯಾರ್ಥಿಗಳ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸುವುದು ಸಮಾಜದ ಕರ...

ಅಪಘಾತದಲ್ಲಿ ಗಾಯಗೊಂಡ ಕಾಂಗ್ರೆಸ್ ಕಾರ್ಯಕರ್ತ ಆರೋಗ್ಯ ವಿಚಾರಿಸಿದ :ಶಾಸಕ ಉಮೇಶ್ ಮೇಟಿ

ಇಮೇಜ್
ಬಾಗಲಕೋಟೆ: ಅಪಘಾತದಲ್ಲಿ ಕೈ ಮುರಿತಕ್ಕೊಳಗಾಗಿ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ಕಾಂಗ್ರೆಸ್ ಕಾರ್ಯಕರ್ತ ಹಾಗೂ ಜಿಲ್ಲಾ ಎಸ್‌ಸಿ–ಎಸ್‌ಟಿ ಅಲೆಮಾರಿ ಅಭಿವೃದ್ಧಿ ನಿಗಮ, ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ಸರ್ಕಾರದ ನಿರ್ದೇಶಕ ಮತ್ತು ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಹನುಮಂತ ಭಜಂತ್ರಿ ಅವರನ್ನು ಶಾಸಕ ಉಮೇಶ್ ಮೇಟಿ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಹನುಮಂತ ಭಜಂತ್ರಿ ಅವರ ಆರೋಗ್ಯ ಸ್ಥಿತಿ ಹಾಗೂ ಚಿಕಿತ್ಸೆಯ ಕುರಿತು ಮಾಹಿತಿ ಪಡೆದ ಶಾಸಕ ಉಮೇಶ್ ಮೇಟಿ ಅವರು, ಶೀಘ್ರ ಗುಣಮುಖರಾಗಿ ಎಂದಿನಂತೆ ಸಾರ್ವಜನಿಕ ಹಾಗೂ ಪಕ್ಷದ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತಾಗಲಿ ಎಂದು ಹಾರೈಸಿದರು.

ಕನಕ ಭವನ ಕಾಮಗಾರಿ ಸ್ಥಳಕ್ಕೆ ಶಾಸಕ ಉಮೇಶ್ ಮೇಟಿ ಭೇಟಿ

ಇಮೇಜ್
ಬಾಗಲಕೋಟೆ: ಬೀಳಗಿ ಕ್ರಾಸ್‌ನಲ್ಲಿರುವ ಶ್ರೀ ಗುರು ಕನಕದಾಸ ಕಲ್ಯಾಣ ಮಂಟಪ ಹಾಗೂ ಕನಕ ಭವನದ ನಿರ್ಮಾಣ ಕಾಮಗಾರಿ ನಡೆಯಲಿರುವ ಸ್ಥಳಕ್ಕೆ ಬಾಗಲಕೋಟೆ ಶಾಸಕ ಉಮೇಶ್ ಮೇಟಿ ಅವರು ಭೇಟಿ ನೀಡಿ ಪರಿಶೀಲಿಸಿದರು. ಕಾಮಗಾರಿಯ ಸ್ಥಳ ಹಾಗೂ ಕೈಗೊಳ್ಳಬೇಕಾದ ಅಭಿವೃದ್ಧಿ ಕಾರ್ಯಗಳ ಕುರಿತು ಅಧಿಕಾರಿಗಳು ಹಾಗೂ ಮುಖಂಡರೊಂದಿಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ಎಸ್.ಆರ್. ಮೇಲನಾಡ, ಎಂ.ಎಂ. ಶಂಬೋಜಿ, ರವೀಂದ್ರ ಶಿರೂರ, ಎಸ್.ಟಿ. ಕಂದಗಲ್ಲ ಹಾಗೂ ಬಸು ತೆಲಗಿ ಉಪಸ್ಥಿತರಿದ್ದರು.

ಈದ್ ಮಿಲಾದ್ ಮೆರವಣಿಗೆಗೆ ಶಾಸಕರಿಂದ ಚಾಲನೆ

ಇಮೇಜ್
ಬಾಗಲಕೋಟೆ: ಪವಿತ್ರ ಈದ್ ಮಿಲಾದ್ ಅಂಗವಾಗಿ ನವನಗರದ ಅಂಜುಮನ್ ಶಿಕ್ಷಣ ಸಂಸ್ಥೆಯಿಂದ 7 ಕಿ.ಮೀ. ದೂರದವರೆಗೆ ಆಯೋಜಿಸಿದ್ದ ಮೆರವಣಿಗೆಗೆ ಶಾಸಕ ಉಮೇಶ್ ಮೇಟಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪವಿತ್ರ ಈದ್ ಮಿಲಾದ್ ಹಬ್ಬವು ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಸಹೋದರತ್ವವನ್ನು ಮತ್ತಷ್ಟು ಗಟ್ಟಿಗೊಳಿಸಲಿ ಎಂದು ಹಾರೈಸಿದರು. ಎಲ್ಲರೂ ಪರಸ್ಪರ ಪ್ರೀತಿ ಹಾಗೂ ಗೌರವದಿಂದ ಬದುಕುವ ಮೂಲಕ ಸಮಾಜದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದರು. ಈ ಸಂದರ್ಭದಲ್ಲಿ ಸಮಾಜದ ಮುಖಂಡರು, ಅಂಜುಮನ್ ಶಿಕ್ಷಣ ಸಂಸ್ಥೆಯ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ವಿವಿಧತೆಯಲ್ಲಿ ಏಕತೆ ಸಾರಿದ ಅನ್ನ ಸಂತರ್ಪಣೆ

ಇಮೇಜ್
ಬಾಗಲಕೋಟೆ: ಪ್ರವಾದಿ ಮೊಹಮ್ಮದ್ (ಸ) ಅವರ ಜನ್ಮದಿನದ ಅಂಗವಾಗಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಕ್ರೀಡಾ ಹಾಗೂ ಗ್ರಾಮೀಣಾಭಿವೃದ್ಧಿ ಸಂಘ, ನವನಗರ–ಬಾಗಲಕೋಟೆ ವತಿಯಿಂದ ಜಿಲ್ಲಾಸ್ಪತ್ರೆಯ ರೋಗಿಗಳು ಹಾಗೂ ಅವರ ಕುಟುಂಬದವರಿಗೆ ಅನ್ನ ಸಂತರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ವಿವಿಧ ಸಮುದಾಯಗಳ ಮುಖಂಡರಾದ ಮಲ್ಲಿಕಾರ್ಜುನ ಮೇಟಿ, ಡಾ. ಶೇಖರ ಮಾನೆ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಮಹೇಶ ಕೋಣಿ, ನಾಗರಾಜ ಹದ್ಲಿ, ಖಾರಿ ಸಮೀವುಲ್ಲಾ, ಸಲೀಂ ಮೋಮಿನ, ಶ್ರೀಧರ ನೀಲನಾಯಕ ಸೇರಿದಂತೆ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಗಣ್ಯರು, ಸೌಹಾರ್ದತೆ, ಸಹೋದರತ್ವ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವ ಅಗತ್ಯವಿದೆ. ಎಲ್ಲರೂ ಪರಸ್ಪರ ಪ್ರೀತಿ, ಗೌರವ ಹಾಗೂ ಸಹಬಾಳ್ವೆಯಿಂದ ಜೀವನ ನಡೆಸಬೇಕು ಎಂಬ ಸಂದೇಶ ನೀಡಿದರು. ಸಂಘದ ಪದಾಧಿಕಾರಿಗಳಾದ ಲಖನ ರೋಕಡೆ, ಇಲಿಯಾಸ್ ಮದರಖಂಡಿ, ಜಯಚಂದ್ರ ಪೂಜಾರಿ, ಶ್ರೀಕಾಂತ ನೀಲನಾಯಕ, ಸಂತೋಷ ನೀಲನಾಯಕ, ಬಂದೇನಮಾಜ ಬಾದಾಮಿ, ಜಹೂರಅಬ್ಬಸ್ ಕಲಾಸಿ, ಶಹಿನಶಾ ಡಾಲಾಯತ, ಆರೀಪ ಡಾಲಾಯತ, ಮೌಲಾಸಾಬ ಹೀರೆಮನಿ, ಜಾವೀದ್ ಬೇಪಾರಿ, ಇಸ್ಮಾಯಿಲ್ ನಧಾಪ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು. ಅನ್ನ ಸಂತರ್ಪಣೆಯಲ್ಲಿ ಜಿಲ್ಲಾಸ್ಪತ್ರೆಯ ರೋಗಿಗಳು, ಅವರ ಕುಟುಂಬದವರು ಹಾಗೂ ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡರು.